ಕ್ರಾಂತಿವಾಣಿ ವಾರ್ತೆ ಯಾದಗಿರಿ: ಮತಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದೇ ನನ್ನ ಪ್ರಮುಖ ಗುರಿಯಾಗಿದೆ ಎಂದು ಯಾದಗಿರಿ ಮತಕ್ಷೇತ್ರದ ಶಾಸಕರಾದ ಚನ್ನಾರೆಡ್ಡಿ ಗೌಡ ಪಾಟೀಲ್ ತುನ್ನೂರ ಹೇಳಿದರು. 2022.2023.ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆ ಅಡಿಯಲ್ಲಿ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ 7 ನೇ ಅಂಗನವಾಡಿಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಶಾಸಕರ ನಡೆ ಹಳ್ಳಿ ಕಡೆ ಪ್ರವಾಸದಲ್ಲಿ ಇಂದು ನಾಯ್ಕಲ. ಟೋಕಾಪುರ್. ಬೋಳಾರಿ. ಗುಂಡಗುರ್ತಿ. ಅಗಸ್ತಿಹಾಳ.ಟಿ.ವಡಗೇರಾ.ಕಿರಿಹೈಯಾಳ. ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು
ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಸಿ.ಸಿ ರಸ್ತೆಗಳು ಚರಂಡಿ ನಿರ್ಮಾಣ ಸ್ವಚ್ಛ ಕುಡಿಯುವ ನೀರು ಸರಬರಾಜು ಅಂಗನವಾಡಿ ರಸ್ತೆಗಳ ದುರಸ್ತಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಪ್ರಮುಖ ಆದ್ಯತೆ ನೀಡುತ್ತೇನೆ ಮತಕ್ಷೇತ್ರದಲ್ಲಿ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಕೂಡಲೆ ಅತಿಥಿ ಶಿಕ್ಷಕರ ನೇಮಕಕ್ಕೆ ಮುಂದಾಗಿದ್ದೇವೆ ಅಧಿಕಾರಿಗಳು ಕೂಡ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸಬೇಕು ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಖಡಕ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೇಪ್ಪ ಬಿಳಾರ. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ. ನಾಯ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ.ಮೈರುನಿಸಾ. ಉಪಾಧ್ಯಕ್ಷರಾದ. ಯಲ್ಲಮ್ಮ ದೊರೆ. ಶರಣಪ್ಪ ಕ್ಯಾತ್ನಳಾ. ಮಲ್ಲಿಕಾರ್ಜುನ್ ರೆಡ್ಡಿ ಗುಂಡಗುರ್ತಿ. ಗ್ರಾಮ ಪಂಚಾಯತ್ ಸದಸ್ಯ ಶರಣಪ್ಪ ಬೊಳಾರಿ. ರಾಜು ಗೌಡ. ಹಣಮಂತ ಟೋಕಾಪುರ. ನಬಿಸಾಬ. ಸತ್ಯನಾರಾಯಣ ದೊರಿ. ಶಾಸಕರ ಆಪ್ತ ಸಹಾಯಕರಾದ. ರೇವಣಸಿದ್ದಯ್ಯ ಹೊರಪೇಟ ಮಠ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು