ಅ. 1 ರಂದು ಕೊಪ್ಪಳದಲ್ಲಿ ಸರ್ಕಾರಿ ನೌಕರ ಸಂಘದ ಸಭೆ. ರಾಯಪ್ಪ ಗೌಡ ಹುಡೆದ್

ಶಹಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿಯ ಸರ್ವ ಸದಸ್ಯರ ವಿಶೇಷ ಮಹಾಸಭೆಯು ಇದೇ ಅಕ್ಟೋಬರ್ ೦೧ರಂದು ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದೆ. ಸಂಘದ ರಾಜ್ಯ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಬೈಲಾ ಉಪ ವಿಧಿಗಳು ೨೦೨೨ರ ಕೆಲವು ಉಪವಿಧಿಗಳಿಗೆ ತಿದ್ದುಪಡಿ ತರಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಶಹಾಪೂರ ತಾಲೂಕಿನ ಎಲ್ಲಾ ಇಲಾಖೆಗಳ ಸರ್ವ ನೌಕರರು ಅಂದು ಬೆಳಿಗ್ಗೆ ೧೧:೦೦ ಗಂಟೆಗೆ ವರ್ಚುವಲ್ ವೇದಿಕೆ ಮೂಲಕ ಬಾಗವಹಿಸಲು ಸದಸ್ಯರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದುhttps://bit.ly/ksgea splgbm ಲಿಂಕ್ ಅನ್ನು ಬಳಸಿ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಮೊಬೈಲ್ ಸಂಖ್ಯೆ: ೯೬೨೦೩೩೨೫೪೧ ಮತ್ತು ೯೭೪೦೪೮೭೮೮೮ ಸಂಪರ್ಕಿಸಲು ಕೋರಲಾಗಿದೆ ಎಂದು ಸರಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಉಪಾಧ್ಯಕ್ಷ ರಾಯಪ್ಪಗೌಡ ಜಿ.ಹುಡೇದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ