ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಶಾಸಕ ಆರ್ ವಿ ನಾಯಕ ಚಾಲನೆ
ಕ್ರಾಂತಿವಾಣಿ ವಾರ್ತೆ ಸುರಪುರ: ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಭಾರತ ರತ್ನ ಸರ್ವಪಲ್ಲಿ ರಾಧಾಕೃಷ್ಣ 136ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಉದ್ಘಾಟಿಸಿದರು. ಬಳಿಕ ಭಾರತ ರತ್ನ, ಉಪರಾಷ್ಟ್ರಪತಿ ಸರ್ವಪಲ್ಲಿ
ಡಾ. ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಪ್ರಥಮವಾಗಿ ಜಿಲ್ಲಾ ಮಟ್ಟ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡಲಾಯಿತು.
ಬಿ ಆರ್ ಪಿ ಖಾದರ್ ಪಟೇಲ್ , ಬಾಲಕರ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ, ಜಾನಕಿದೇವಿ ಪ್ರೌಢಶಾಲೆ ಮುಖ್ಯಶಿಕ್ಷಕ ಹಣಮಂತ ದೊರೆ ಮಾತನಾಡಿದರು. ನಿವೃತ್ತ ಲೋಕಾಯುಕ್ತ ಎಸ್ ಪಿ ಸಿ.ಎನ್ ಭಂಡಾರಿ, ಪ್ರಥಮ ದರ್ಜೆ ಗುತ್ತಿಗೆದಾರ, ಪ್ರಕಾಶ ಗುತ್ತಿಗೆದಾರ, ರಮೇಶ ದೊರೆ, ಗೋವಿಂದಪ್ಪ ಟಣಿಕೆದಾರ ಇತರರಿದ್ದರು