ಸುರುಪುರದ ಮಲ್ಲಾ ಬಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ

ಕ್ರಾಂತಿವಾಣಿ ವಾರ್ತೆ ಸುರಪುರ: ರಾಜ್ಯ ಸರ್ಕಾರ ಮಹಾತ್ಮ ಗಾಂಧೀಜಿ ಜಯಂತಿ ನಿಮಿತ್ತ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸುರಪುರ ತಾಲೂಕಿನ ಮಲ್ಲಾ ಬಿ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ.

ಗಾಂಧಿ ಗ್ರಾಮ ಪುರಸ್ಕಾರಕ್ಕೆ 5 ಲಕ್ಷ ರೂ. ನಗದು ಗಾಂಧಿ ಗ್ರಾಮ ಸ್ಮರಣೆಕೆಯನ್ನು ಒಳಗೊಂಡಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 2ರಂದು ನಡೆಯುವ ಕಾರ್ಯಕ್ರಮದಲ್ಲಿ ಮಲ್ಲಾಬಿ ಗ್ರಾಮದ ಅಧ್ಯಕ್ಷರಾದ ರೇಣುಕಾ ಶಿವಪ್ಪ ಮತ್ತು ಪಿಡಿಒ ಪುತ್ರಪ್ಪ ಗೌಡ ಅವರು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸುವವರು.

ತಾಲೂಕಿನ ಮಲ್ಲಾ ಬಿ ಗ್ರಾಮದಲ್ಲಿ ಕೆರೆ ಹೂಳೆತ್ತುವುದು, ಕೂಲಿಕಾರ್ಮಿಕರಿಗೆ ಉದ್ಯೋಗ, ಉದ್ಯೋಗ ಖಾತ್ರಿ ಯೋಜನೆ ಅಡಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಹಣಕಾಸಿನ ಯೋಜನೆಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಶಾಲೆಗಳಿಗೆ ಶೌಚಾಲಯ ಗ್ರಾಮಗಳಲ್ಲಿ ಸೋಲಾರ್ ದೀಪ, ಚರಂಡಿ ವ್ಯವಸ್ಥೆ, ಗುಣಮಟ್ಟದ ರಸ್ತೆಗಳನ್ನು ಮಾಡಲಾಗಿದೆ. ಅಂಗನವಾಡಿ ಕೇಂದ್ರವನ್ನು ಚೆನ್ನಾಗಿ ಇಟ್ಟುಕೊಳ್ಳಲಾಗಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮಲ್ಲಾಬಿ ಗ್ರಾಪಂ ಆಯ್ಕೆ ಆಗಿರೋದು ಗ್ರಾಮಸ್ಥರಲ್ಲಿ ಅತೀವ ಸಂತಸ ಉಂಟು ಮಾಡಿದೆ.

ಗ್ರಾಪಂ ಅಧ್ಯಕ್ಷರಾದ ರೇಣುಕಾ ಶಿವಪ್ಪ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ದೊರೆತಿರುವ ಎಲ್ಲಾ ಯೋಜನೆಗಳನ್ನು ಬಳಸಿಕೊಂಡು ಮಲ್ಲಾ ಬಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿ ಮಾಡಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿರುವ ಎಲ್ಲಾ ಸದಸ್ಯರ ಬೆಂಬಲ ದೊರೆತಿದೆ. ನನ್ನ ಅಧಿಕಾರ ಅವಧಿ ಇರುವವರೆಗೂ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವೆ ಎಂದು ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುತ್ರಪ್ಪಗೌಡ ಮಾತನಾಡಿ, ಮಲ್ಲಾ ಬಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಅರ್ಹವಾಗಿದೆ. ಸರ್ಕಾರದಿಂದ ಬಂದ ಅನುದಾನವನ್ನು ಅಭಿವೃದ್ಧಿಗೆ ಬಳಸಲಾಗಿದೆ. ಗ್ರಾಪಂನಲ್ಲಿ ಮಾಡಿರುವ ಕಾರ್ಯಗಳನ್ನು ಜನರಿಗೆ ಸ್ಪಂದಿಸುವ ಛಾಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅತೀವ ಸಂತಸ ತಂದಿದೆ ಎಂದು ತಿಳಿಸಿದರು

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ