೨೮ ದಿನಗಳ ವರೆಗೆ ನಿರಂತರ ನೀರು ಪೂರೈಕೆಗೆ ಮುಖ್ಯಮಂತ್ರಿ ಒಪ್ಪಿಗೆ: ಸಂಕಷ್ಟದಲ್ಲಿರುವ ರೈತರಿಗೆ ಸಿಹಿ ಸುದ್ದಿ: ಸಚಿವ ದರ್ಶನಾಪುರ್,

ಕ್ರಾಂತಿವಾಣಿ ಶಹಾಪುರ 

ಬೆಳೆಗಳು ನೀರಿಲ್ಲದೆ ಕಮರುತ್ತಿವೆ. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು, ಬಸವಸಾಗರ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಜೆ.ಬಿ.ಸಿ., ಎಂ.ಬಿ.ಸಿ., ಎಸ್.ಬಿ.ಸಿ. ಹಾಗೂ ಮಲ್ಲಾಬಾದ್ ಲಿಫ್ಟ್ 1.2.3, ಕಾಲುವೆಗಳ ಮುಖಾಂತರ ಅ. 28 ರಿಂದ ನ.4 ರವರೆಗಿರುವ ವಾರ ಬಂಧಿಯನ್ನು ರದ್ದು ಪಡಿಸಿ 28 ದಿನಗಳವರೆಗೆ ಸತತ ನೀರು ಹರಿಸಬೇಕು ಎಂದು ಸಣ್ಣ ಕೈಗಾರಿಕೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಇಂದು ಸಿ.ಎಂ. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಶಹಾಪೂರ ಮತ್ತು ಜೇವರ್ಗಿ ತಾಲ್ಲೂಕಿನ ರೈತರ ಪರಿಸ್ಥಿತಿಯನ್ನು ಎಳೆ ಎಳೆಯಾಗಿ ಬಿಡಿಸಿಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಭಾವಿ ರಾಜಕೀಯ ನಾಯಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಾವರಿ ಸಲಹಾಸಮಿತಿಯ ಅಧ್ಯಕ್ಷರಾದ ಆರ ಬಿ ತಿಮ್ಮಾಪುರ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಮಾಹಿತಿ ಪಡೆದು ವಾರ ಬಂಧಿಯನ್ನು ರದ್ದುಗೊಳಿಸಿ ಸತತ ನೀರ ಹರಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸಲಹಾ ಸಮಿತಿ ಅಧ್ಯಕ್ಷರು ವಾರ ಬಂಧಿ ರದ್ದುಗೊಳಿಸಿ ಕಾಲುವೆಗೆ ನೀರು ಹರಿಸಲು ಆದೇಶಿಸಿದ್ದಾರೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಸಲಹಾ ಸಮಿತಿ ಅಧ್ಯಕ್ಷರಾದ ಆರ್ ಬಿ ತಿಮ್ಮಾಪುರ ಅವರನ್ನು ಸಚಿವ ದರ್ಶನಾಪುರ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷರ ಡಾ. ಅಜಯ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ

 “ರೈತರ ಕಷ್ಟಗಳಿಗೆ ಸ್ಪಂದಿಸಿ ಜನಪರ ನಾಯಕರೆಂದು ಸಣ್ಣ ಕೈಗಾರಿಕೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸಾಬೀತುಪಡಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ರೈತರು ಸಚಿವ ದರ್ಶನಾಪೂರ್ ಅವರನ್ನು ಅಭಿನಂದಿಸಿದ್ದಾರೆ”.

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ