ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ: ಸಮಾಜದಲ್ಲಿರುವ ಪ್ರತಿಯೊಬ್ಬರೂ ಸಂವಿಧಾನದ ಕಾನೂನಡಿಯಲ್ಲೇ ಜೀವಿಸಬೇಕಾಗಿದ್ದು, ಶಾಂತಿಯುತ ಸಮಾಜಕ್ಕೆ ಕಾನೂನುಗಳು ಅಗತ್ಯವಾಗಿವೆ ಎಂದು ಹಿರಿಯ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಮತಗಿ ಹೇಳಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಆಡಳಿತ ಆಶ್ರಯದಲ್ಲಿ ರಾಷ್ಟಿçÃಯ ಕಾನೂನುಗಳ ಸೇವೆಗಳ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಯಿ ಗರ್ಭದಲ್ಲಿ ಇರುವಾಗಿನಿಂದ ಹಿಡಿದು ಸಾವಿನ ನಂತರದ ಅಂತ್ಯಸAಸ್ಕಾರದ ವರೆಗೂ ಕಾನೂನುಗಳು ಕಾಪಾಡುತ್ತವೆ. ೧೯೮೫ ನವೆಂಬರ್ ೯ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಿಸಲಾಗುತ್ತದೆ ಎಂದರು.
ಸಿವಿಲ್ ನ್ಯಾಯಾಧೀಶರಾದ ಮಾರುತಿ ಕೆ. ಮಾತನಾಡಿ, ಸಮಾಜದಲ್ಲಿರುವ ಸಾಮಾನ್ಯರು ಕೂಡ ಕಾನೂನಿನ ಅರಿವಿನ ಜ್ಞಾನ ಇರಬೇಕು. ಇದರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಲೋಕಾ ಅದಾಲತ್ ಮೂಲಕ ನ್ಯಾಯಾಲಯ ಹಾಗೂ ಇತರೆ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುತ್ತದೆ ಎಂದರು.
ಹಿರಿಯ ವಕೀಲ ನಿಂಗಣ್ಣ ಚಿಂಚೋಡಿ ರಾಷ್ಟ್ರೀಯ ಕಾನೂನು ಸೇವೆಗಳ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ ಮಾತನಾಡಿದರು.
ಸರಕಾರಿ ಸಹಾಯಕ ಅಭಿಯೋಜಕರಾದ ಸುರೇಶ ಪಾಟೀಲ್, ಮರೆಪ್ಪ್ ಹೊಸ್ಮನಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಂದಕುಮಾರ ಕನ್ನೆಳ್ಳಿ, ಸಂತೋಷ ಕುಮಾರ ಗಾರಂಪಳ್ಳಿ ಸೇರಿದಂತೆ ಇತರರಿದ್ದರು.