ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಸರಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ರಾಯಪ್ಪಗೌಡ ಹುಡೆದ ಆಯ್ಕೆ:

ಕ್ರಾಂತಿ ವಾಣಿ ಶಹಾಪುರ,

ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ರಾಜ್ಯಮಟ್ಟದ ಪ್ರತಿಷ್ಠಿತ ಕನ್ನಡ ವಿಕಾಸ ರತ್ನ ಪ್ರಶಸ್ತಿಯನ್ನು ಶಹಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ರಾಯಪ್ಪಗೌಡ ಹುಡೇದ ಅವರ ಸಂಘಟನೆ ಹಾಗೂ ಸಮಾಜಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯಮುನಾ ಹೆಚ್ಆರ್ ತಿಳಿಸಿದ್ದಾರೆ. ಇದೆ ನ. ೩೦ ರಂದು ಗುರುವಾರ ಮೈಸೂರು ನಗರದ ಹುಣಸೂರು ರಸ್ತೆಯಲ್ಲಿರುವ ರಂಗಮAದಿರದಲ್ಲಿ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿನಂದನೆ. ರಾಜ್ಯಮಟ್ಟದ ಪ್ರತಿಷ್ಠಿತ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಭಾಜನರಾದ ರಾಯಪ್ಪ ಗೌಡ ಹುಡೇದ ಅವರನ್ನು ಸಣ್ಣ ಕೈಗಾರಿಕೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಹಾಗೂ ಸರಕಾರಿ ನೌಕರರು ಅಭಿನಂದಿಸಿದ್ದಾರೆ.

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ