ಯಾದಗಿರಿಯಲ್ಲಿ ಇದೇ ಡಿಸೆಂಬರ್ 3 ರಂದು ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಮ್ಯಾನೇಜ್ಮೆಂಟ್ ಸಂಘ (RUPSA)ದ ಸಭೆ:

ಕ್ರಾಂತಿ ವಾಣಿ ಶಹಾಪುರ.

ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಮ್ಯಾನೇಜ್ಮೆಂಟ್ ಸಂಘ (RUPSA) ದ ಸಭೆಯನ್ನು ಇದೇ ಡಿಸೆಂಬರ್ 03,2023 ರಂದು ರವಿವಾರ ಬೆಳಿಗ್ಗೆ 11.00 ಯಾದಗಿರಿಯ ಹೊಸ ಬಸ್ ನಿಲ್ದಾಣ ಹತ್ತಿರ ಇರುವ ಹುಲಿಗೆಪ್ಪ ಹಿರಿಯರ ಪ್ರಾಥಮಿಕ ಪ್ರೌಢ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪರಮೇಶ್ವರಪ್ಪ ಕರಡಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಂಘದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವದು ಹಾಗೂ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಆದ್ದರಿಂದ ಈ ಒಂದು ಸಭೆಗೆ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಭಾಗವಹಿಸಿ ಸಭೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಸಲಹೆ ಸೂಚನೆ ನೀಡಬೇಕು. ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಹೆಚ್ಚಿನ ಮಾಹಿತಿಗಾಗಿ ಈ ಮೋ. ನಂ 8861036005, 8618030559 ಸಂಪರ್ಕಿಸಲು ಸಂಘದ ಜಿಲ್ಲಾ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ