ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ
ಸುರಪುರ: ಸಮಾಜದ ಅಭಿವೃದ್ಧಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಮುಂದುವರಿಯಲಿ. ಅರ್ಹ ಪ್ರತಿಭೆಗಳನ್ನು ಶೋಧಿಸಿ ಪುರಸ್ಕರಿಸುವ ಕೆಲಸ ನಿರಂತರವಾಗಿ ನಡೆಯಲಿ ಎಂದು ನಿಷ್ಠಿಕಡ್ಲಪ್ಪನವರ ಮಠದ ಪೀಠಾಧಿಪತಿ ಶ್ರೀ ಪ್ರಭುಲಿಂಗ ಸ್ವಾಮೀಜಿ ಹೇಳಿದರು.
ನಗರದ ಗರುಡದ್ರಿ ಕಲಾಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡ್ಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕಾರ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಗೌರವ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಸಾಧನೆ ಮಾಡಿರುವವರನ್ನು ಪ್ರೋತ್ಸಾಹಿಸಿದರೆ ಮತ್ತಷ್ಟು ಕಾರ್ಯ ಮಾಡಲು ಪ್ರೇರೇಪಿಸದಂತಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಿ ಬೆಳೆಲು ಅವಕಾಶ ನೀಡಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜಾ ಮುಕುಂದ ನಾಯಕ, ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕಾರವು ಮಾದರಿಯಾಗಿದ್ದು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮುಂದಿನ ದಿನಗಳಲ್ಲೂ ಕೂಡ ಸ್ಮರಣ Ãಯ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಡುವ ಕಾರ್ಯ ಮಾಡಬೇಕು. ಇದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಕರ್ನಾಟಕ ಏಕೀಕರಣ ನಡೆದು ಬಂದ ದಾರಿ ಕುರಿತು ಉಪನ್ಯಾಸ ನೀಡಿದ ರಜಾಕ್ ಭಾಗವಾನ್, ಭಾಷಾವಾರು ಪ್ರಾಂತ್ಯಗಳು ರಚನೆಗೊಂಡ ೫೦ ವರ್ಷ ಪೂರ್ಣಗೊಂಡಿದ್ದರೂ ಕರ್ನಾಟಕದ ಹಲವು ಭಾಗಗಳು ಮಹಾರಾಷ್ಟç, ಕೇರಳ, ಆಂಧ್ರಪ್ರದೇಶ, ಗೋವಾ ರಾಜ್ಯಗಳಲ್ಲಿ ಹರಿದು ಹಂಚಿ ಹೋಗಿದ್ದಾರೆ. ಹೀಗಾಗಿ ಇನ್ನೂ ಸಂಪೂರ್ಣ ಕರ್ನಾಟಕ ಏಕೀಕರಣವಾಗಿಲ್ಲ. ಹರಿದು ಹಂಚಿಹೋಗಿರುವ ಎಲ್ಲ ಕನ್ನಡದ ಪ್ರದೇಶಗಳು ಕರ್ನಾಟಕದಲ್ಲಿ ವಿಲೀನಗೊಂಡಾಗ ಮಾತ್ರ ಕರ್ನಾಟಕ ಏಕೀಕರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ಶರಣಬಸಪ್ಪ ಯಾಳವಾರ, ಕಸಾಪ ಕರುನಾಡಿನ ಎಲ್ಲರ ಧ್ವನಿಯಾಗಿದ್ದು, ಏಕೀಕರಣಗೊಂಡು ೫೦ ವರ್ಷ ಪೂರ್ಣಗೊಂಡಿದ್ದರಿAದ ಸುವರ್ಣ ಸಂಭ್ರಮಾಚರಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಕನ್ನಡದ ಎಲ್ಲ ಮನಸ್ಸುಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕನ್ನಡದ ಥೇರನ್ನು ಎಳೆಯಬೇಕು ಎಂದು ಕರೆ ನೀಡಿದರು.
ಪ್ರಶಸ್ತಿ ಪುರಸ್ಕೃತ ಟಿಎಚ್‌ಒ ಡಾ. ಆರ್.ವಿ. ನಾಯಕ ಕೊರೋನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಇಲಾಖೆಯ ಎಲ್ಲ ಸಿಬ್ಬಂದಿ ಸಹಕಾರ ಅತ್ಯಮೂಲ್ಯವಾದ್ದು. ಅವರೆಲ್ಲರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿ ಆಯಿತು ಇಂದಿನ ಈ ಪ್ರಶಸ್ತಿ ಆ ಎಲ್ಲರಿಗೂ ಸಲ್ಲುತ್ತದೆ ಎಂದರು.
ಗೌರವ ಸನ್ಮಾನ ಸ್ವೀಕರಿಸಿ ರಂಗಂಪೇಟ ಸಾಹಿತ್ಯ ಸಂಘದ ಅಧ್ಯಕ್ಷ ಸೂಗೂರೇಶ ವಾರದ ಮಾತನಾಡಿದರು. ಹಿರಿಯ ಸಾಹಿತಿ ಡಾಕ್ಟರ್ ಸತ್ಯನಾರಾಯಣ ಆಲದಾರ್ತಿ, ಸುರಪುರ ಟಿಎಚ್‌ಒ ಡಾ. ಆರ್.ವಿ. ನಾಯಕ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘಕ್ಕೆ ೨೦೨೩ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪಡೆದ ಅಧ್ಯಕ್ಷ ಸುಗುರೇಶ್ ವಾರದ, ಯಾದಗಿರಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಶಿವಶರಣೆಯ್ಯ ಸ್ವಾಮಿ ಬಳ್ಳುಂಡಗಿಮಠ ಅವರರನ್ನು ಗೌರವ ಸನ್ಮಾನ ಮಾಡಲಾಯಿತು.
ಹಿರಿಯ ಸಾಹಿತಿಗಳಾದ ಶಾಂತಪ್ಪ ಬೂದಿಹಾಳ, ಶ್ರೀನಿವಾಸ್ ಜಾಲವಾದಿ ಪ್ರಾಸ್ತಾವಿಕವಾಗಿ ಮಾತನಾಡಿದರು ಪ್ರಕಾಶ್ ಸಜ್ಜನ್, ಬಸವರಾಜಪ್ಪ ನಿಷ್ಠಿ ದೇಶಮುಖ್, ಹಿರಿಯ ಸಾಹಿತಿ ನಬಿಲಾಲ್ ಮಕಾಂದರ, ಕನಕಪ್ಪ ವಾಗಣಗೇರಿ, ಮಹಾಂತೇಶ್ ಗೋನಾಲ್, ಶ್ರೀಶೈಲ್ ಯಂಕಂಚಿ, ನ್ಯಾಯವಾದಿಗಳಾದ ನಿಂಗಣ್ಣ ಚಿಂಚೋಡಿ, ಮಲ್ಲಿಕಾರ್ಜುನಯ್ಯ ಹಿರೇಮಠ ಸೇರಿದಂತೆ ಇತರರಿದ್ದರು.
ಸಾಹಿತಿ ಸಾಹೇಬ್ ರೆಡ್ಡಿ ಇಟಗಿ ನಾಡಗೀತೆ ಹಾಡಿದರು. ಅನ್ವರ ಜಮಾದ ಸ್ವಾಗತಿಸಿದರು. ಉಪನ್ಯಾಸಕ ದೇವು ಹೆಬ್ಬಾಳ್ ನಿರೂಪಿಸಿದರು.