ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ: ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿಸುವ ಕೆಲಸ ಎಲ್ಲರಿಂದ ನಡೆಯಬೇಕಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ಸಮಾವೇಶಗಳಿಂದ ಸಾಧ್ಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ ಉಳಿವಿಗಾಗಿ ಹಾಗೂ ಜನರಲ್ಲಿ ಅರಿವು ಮೂಡಿಸಲು ಡಿ. ೧೮ರಂದು ಬೆಳಗ್ಗೆ ೧೧:೩೦ಕ್ಕೆ ಯಾದಗಿರಿಯ ಜಿಲ್ಲಾ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾಮಟ್ಟದ ಜಾಗೃತಿ ಸಮಾವೇಶ ನಡೆಯಲಿದೆ ಎಂದರು.
ಸಂವಿಧಾನದ ಮೂಲ ಆಶಯಗಳನ್ನೇ ಬುಡಮೇಲು ಮಾಡಲು ಮೂಲಭೂತವಾದಿ ಸಂಘ ಪರಿವಾರದಂತಹ ಸಂಘಟನೆಗಳು ಪ್ರಯತ್ನಿಸುತ್ತಾ ಬರುತ್ತಿವೆ. ಕೋಮುವಾದಿಗಳು ನಾವು ಈಗಿರುವ ಸಂವಿಧಾನವನ್ನು ಬದಲು ಮಾಡುತ್ತೇವೆ ಎಂದು ನೇರವಾಗಿಯೇ ಹೇಳುವ ಮಟ್ಟಕ್ಕೆ ಇಳಿದ್ದಿದ್ದಾರೆ. ಅವರಿಗೆ ಪಾಠ ಕಲಿಸಬೇಕಿದೆ. ಸಮಾವೇಶಕ್ಕೆ ಸುರಪುರ ತಾಲೂಕಿನಿಂದ ೧೦೦೦ ಜನರು ಆಗಮಿಸುತ್ತಾರೆ. ಶಾಸಕ ರಾಜಾ ವೆಂಕಟಪ್ಪ ನಾಯಕ ಮುಖ್ಯಅಥಿಯಾಗಿ ಪಾಲ್ಗೊಳ್ಳುವರು ಎಂದು ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿAದ ದಲಿತರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದರು.
ಸಂಘಟನೆಯ ಕಲಬುರಗಿ ವಿಭಾಗೀಯ ರಾಮಣ್ಣ ಕಲ್ಲದೇವನಹಳ್ಳಿ ಮಾತನಾಡಿ, ಜಾತಿ ಜನಗಣತಿಯನ್ನು ನಡೆಸಲು ಕೇಂದ್ರ ಸರಕಾರ ಸಂವಿಧಾನಿಕ ಕ್ರಮ ಕೈಗೊಳ್ಳಬೇಕು. ಹಿಂದುಳಿದ ವರ್ಗಗಳ ಮಹಿಳೆಯರಿಗೆ ಕಡ್ಡಾಯವಾಗಿ ರಾಜಕೀಯ ಮೀಸಲಾತಿ ನೀಡಬೇಕು. ಭೂ ಹೀನ ಕೃಷಿ ಕಾರ್ಮಿಕರಿಗೆ ಭೂಮಿ ಮಂಜೂರು ಮಾಡಬೇಕು. ಸರಕಾರಿ ಅರೆಸರಕಾರಿ, ಶಿಕ್ಷಣ ಇಲಾಖೆಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಂತರ ಜಾತಿ ವಿವಾಹಿತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವ ಧ್ವನಿಗಳು ಸಮಾವೇಶದಲ್ಲಿ ಮೊಳಗಲಿವೆ ಎಂದರು.
ಸAಘಟನೆಯ ಜಿಲ್ಲಾ ಉಪ ಸಂಚಾಲಕ ಮಾಳಪ್ಪ ಕಿರದಳ್ಳಿ ಮಾತನಾಡಿ, ಸಂವಿಧಾನ ಉಳಿಸುವ ಮತ್ತು ತಿಳಿವಳಿಕೆ ಮೂಡಿಸುವ ಅಗತ್ಯತೆ ಸಾಕಷ್ಟಿದೆ. ಸಂವಿಧಾನದಡಿ ಜೀವಿಸಲು ಬಿಡದ ಸ್ಥಿತಿ ನಿರ್ಮಾಣವಾಗಿದೆ. ಸಂವಿಧಾನ ಬದಲು ಮಾಡುತ್ತೇವೆ. ಕಾಯ್ದೆ ತಿದ್ದುಪಡಿ ಮಾಡುತ್ತೇವೆ ಎನ್ನುವ ಕೂಗುಗಳು ಕೇಳಿ ಬರುತ್ತವೆ. ಇದರ ವಿರುದ್ಧ ಜಾಗೃತಿ ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ತಾಲೂಕಿನ ಜನತೆ ಅಪಾರ ಸಂಖ್ಯೆಯಲ್ಲಿ ಬರಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಸಂಚಾಲಕ ಮರಳಸಿದ್ದಪ್ಪ ನಾಯ್ಕಲ್, ಅಶೋಕ ಕಣಜೀಕರ್, ಬಸವರಾಜ ಅಣಬಿ, ಪರಶುರಾಮ ಪೂಜಾರಿ, ರಾಜು ದೊಡ್ಡಮನಿ, ಶರಣಪ್ಪ ತಳವಾರಗೇರಿ, ಮಡಿವಾಳ ಎಂಟಮನೆ, ಮುಷ್ಠಳ್ಳಿ ಮಲ್ಲಿಕಾರ್ಜುನ ದೊಡ್ಡಮನಿ ಸೇರಿದಂತೆ ಇತರರಿದ್ದರು.