ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ ಹಾಗೂ ಹುಣಸಗಿ ತಾಲೂಕಿನ ಕೃಷಿ ಇಲಾಖೆಯಲ್ಲಿ ಸುರಪುರ ಹಾಗೂ ಹುಣಸಗಿ ತಾಲೂಕಿನ ಕೃಷಿ ಇಲಾಖೆಯಲ್ಲಿ ಸರಕಾರದಿಂದ ಬಂದಿರುವ ಸೌಲಭ್ಯಗಳಲ್ಲಿ ಅವ್ಯವಹಾರ ನಡೆಯುತ್ತಿರುವುದನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶ್ರೀ ಕನಕ ಯುವ ಸೇನೆಯ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ರಂಗನಗೌಡ ಮಾಲಿಪಾಟೀಲ್ ದೇವಿಕೇರಾ ತಹಸೀಲ್ದಾರಗೆ ಮನವಿ ಸಲ್ಲಿಸಿದ್ದಾರೆ.
ಸುರಪುರ ಹಾಗೂ ಹುಣಸಗಿ ತಾಲೂಕಿನ ಕೃಷಿ ಇಲಾಖೆಯಲ್ಲಿ ಸರಕಾರದಿಂದ ಸಬ್ಸಿಡಿ ದರದಲ್ಲಿ ರೈತರಿಗೆ ತುಂತುರು ನೀರಾವರಿ ಹಾಗೂ ಯಂತ್ರೋಪಕರಣಗಳ ವಿತರಣೆಯಲ್ಲಿ ಸಹಾಯಕ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳು ಕೆಲವೊಂದು ಕಂಪನಿಗಳ ಜೊತೆ ಶಾಮೀಲಾಗಿದ್ದಾರೆ. ಕೆಲವೇ ಕೆಲವು ಕಂಪನಿಗಳಿಗೆ ವರ್ಕ್ ಆರ್ಡರ್ ನೀಡುವುದು, ರೈತರು ತಮ್ಮ ತಮ್ಮ ಸಾಮಾಗ್ರಿಗಳ ವಂತಿಕೆ ತುಂಬಿದರೂ ಹೆಚ್ಚಿನ ಹಣ ನೀಡುವಂತೆ ಪೀಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಹೋರಾಟಗಾರರು ಕೇಳಲು ಹೋದರೆ ಅಂತವರ ಮೇಲೆ ಸ್ವತಃ ಕೆಲ ಅಧಿಕಾರಿಗಳು ಧಮಕಿ ಹಾಕುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಇಲ್ಲದಿದ್ದರೆ ಶೀಘ್ರದಲ್ಲೇ ಕೃಷಿ ಇಲಾಖೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಚ್ಚರಿಸಿದ್ದಾರೆ.