ಕ್ರಾಂತಿ ವಾಣಿ ಶಹಾಪುರ.
ರಾಷ್ಟ್ರದ ಸಂಸ್ಕøತಿಯನ್ನು ಪ್ರಪಂಚಕ್ಕೆ ವಿಸ್ತರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ.ಯುವಜನರಲ್ಲಿ ಸಶಕ್ತ ಮತ್ತು ಸದೃಢ ದೇಶ ಕಟ್ಟುವ ಶಕ್ತಿ ಇದೆ. ಆದ್ದರಿಂದ ಯುವಜನರು ಸಂಘಟಿತರಾಗಬೇಕು. ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಹಾಗೂ ತಾಲೂಕ ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಿದ್ದರಾಮ ಟಿ ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಮನಗುಳಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕ ವಕೀಲರ ಸಂಘ, ಪೋಲಿಸ್ ಇಲಾಖೆ ಹಾಗೂ ಮನಗುಳಿ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರದ ಸಂವಿಧಾನದ ಮೂಲಭೂತ ಕಾನೂನುಗಳು ಹಾಗೂ ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಇದ್ದಾಗ ಉತ್ತಮ ಜೀವನ ಕಟ್ಟಿಕೊಳ್ಳಬಹುದು. ದೌರ್ಜನ್ಯ, ದಬ್ಬಾಳಿಕೆಯಿಂದ ದೂರವಿರಬಹುದು.ಬಡವರು, ಬಲ್ಲಿದರು, ಶೋಷಣೆಗೆ ತುತ್ತಾದವರಿಗೆ ನ್ಯಾಯ ಒದಗಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಅಗತ್ಯ. ಬಡ ಜನರಿಗೆ, ದುರ್ಬಲರಿಗೆ ವಂಚಿತರಾದವರಿಗೆ ನ್ಯಾಯ ಕಲ್ಪಿಸುವುದು, ಉಚಿತ ಕಾನೂನು ಅರಿವು ನೆರವು ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅರ್ಹರು ಅದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಭಾಸ್ಕರ್ ರಾವ್ ಮುಡಬೂಳ ಅವರು, ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು.ವಿದ್ಯಾರ್ಥಿಗಳು ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕಾಯ್ದೆ, ಕಾನೂನುಗಳ ಅರಿವು ಅತ್ಯಗತ್ಯ ಯುವಕರೇ ಭಾರತದ ಆಸ್ತಿಯಾಗಿದ್ದು, ಯುವಕರಿಂದಲೇ ಸದೃಡ ಭಾರತ ನಿರ್ಮಾಣ ಸಾಧ್ಯ ಎಂಬುದು ವಿವೇಕಾನಂದರ ಅಗಮ್ಯ ನಂಬಿಕೆಯಾಗಿತ್ತು.ಯುವಕರು ಯಾವುದರಲ್ಲೂ ಕಡಿಮೆ ಇಲ್ಲ. ಯುವಕರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸುವ ಇಚ್ಛಾಶಕ್ತಿಯುಳ್ಳ ಯುವ ಜನಾಂಗವನ್ನು ಸಶಕ್ತ ರಾಷ್ಟ್ರ ನಿರ್ಮಾಣ ಮಾಡಲು ಬಳಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ಯಾನಲ್ ವಕೀಲೆ ಪರ್ವೀನ್ ಜಮಖಂಡಿ ಅವರು, ಮೂಲಭೂತ ಕಾನೂನಾತ್ಮಕ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ವಿದ್ಯಾರ್ಥಿ ವೃಂದಕ್ಕೆ ಅತ್ಯಗತ್ಯವಾಗಿದೆ. ತಮ್ಮ ಸುತ್ತಲಿನ ಸಮಾಜ, ಜನರಿಗೆ ಅರಿವು ಮೂಡಿಸುವ ಕಾರ್ಯ ಯುವಶಕ್ತಿಯಿಂದ ನಡೆಯಬೇಕಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಮನಗುಳಿ ಟ್ರಸ್ಟ್ ಅಧ್ಯಕ್ಷ ಶಿವಪ್ಪ ಮನಗುಳಿ, ತಾಲೂಕ ವಕೀಲರ ಸಂಘದ ಉಪಾಧ್ಯಕ್ಷ ಶರಣು ಪ್ಯಾಟಿ, ಪಿಎಸ್ಐ ಅಯುರ್ ಖಾನ್, ಕಾಲೇಜು ಪ್ರಾಂಶುಪಾಲ ಪ್ರಭುರಾಜ್ ದೇಶಮುಖ್, ಪ್ಯಾನಲ್ ವಕೀಲ ಮಲ್ಲಪ್ಪ ಕುರಿ ಸೇರಿದಂತೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗಳು, ನ್ಯಾಯಾಲಯ ಸಿಬ್ಬಂದಿಗಳು ಹಾಜರಿದ್ದರು.