ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ:   2024 ರಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನ ಮಂತ್ರಿ: ಯಾಳಗಿ

ಕ್ರಾಂತಿವಾಣಿ ಶಹಾಪುರ.

2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿದ್ದಾರೆ. ಕಾರ್ಯಕರ್ತರು ಹೆಚ್ಚು ಹುಮ್ಮಸ್ಸಿನಿಂದ ಪ್ರತಿ ಮನೆಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಿಕೊಡಬೇಕು ಎಂದು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಕಾರ್ಯಕರ್ತರಿಗೆ ಹೇಳಿದರು.

ನಗರದ ಬೂತ್ ನಂ 167 ವಾರ್ಡ್ ನಂ 06 ರ ಜೀವೇಶ್ವರ ನಗರದಲ್ಲಿ ಗೋಡೆ ಬರಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರಧಾನ ಮಂತ್ರಿ ಮೋದಿಜಿ ಅವರ ಸರ್ಕಾರ ಈ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅವರ ಜನಪರ ಯೋಜನೆಗಳಾದ ಪಿಎಂ ಕಿಸಾನ್ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಜನಧನ್, ಸ್ವಚ್ಛ ಭಾರತ ಮಷೀನ್, ಮೇಕ್ ಇನ್ ಇಂಡಿಯಾ, ಸಂಸದ್ ಆದರ್ಶ ಗ್ರಾಮ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಉಜಲ ಯೋಜನೆ, ಅಟಲ್ ಪಿಂಚಣಿ ಯೋಜನೆ, ಅಮೃತ ಯೋಜನೆ ಸೇರಿದಂತೆ ನೂರಾರು ಯೋಜನೆಗಳ ಮೂಲಕ ಈ ದೇಶದ ನಾಗರಿಕರು ಸ್ವಾಭಿಮಾನದಿಂದ ಬದುಕುವಂತೆ ಮಾಡಿದ್ದಾರೆ. ಈ ದೇಶದ ರಕ್ಷಣೆ, ಬಡತನ ನಿರ್ಮೂಲನೆ, ಉದ್ಯೋಗ ಯೋಜನೆಗಳಿಗಾಗಿ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸ್ಪಷ್ಟ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡುವ ಹೊಳೆ ನಮ್ಮೆಲ್ಲರ ಮೇಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ದೇವಿಂದ್ರಪ್ಪ ಕೊನೇರ, ಮಲ್ಲಿಕಾರ್ಜುನ ಚಿಲ್ಲಾಳ, ಮಲ್ಲಿಕಾರ್ಜುನ ಕಂದಕೊರ, ಬಸವರಾಜಪ್ಪ ವಿಭೂತಿಹಳ್ಳಿ, ರಾಜಶೇಖರ್ ಗೂಗಲ್, ಬಸವರಾಜ ಅರುಣಿ, ಶರಣಪ್ಪ ಟೂಕಾಪೂರ್, ಲಕ್ಷ್ಮಿಕಾಂತ್ ಬಿರಾಳ, ವೀರೇಶ್ ಸುರಪುರಕರ್, ವೆಂಕಟೇಶ್ ಗೌನಳ್ಳಿ, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ