ಬಿಜೆಪಿ ಹಿಂದುಳಿದ ವರ್ಗಗಳ ಸದಸ್ಯರಾಗಿ ಚಂದ್ರು ಗೋಗಿ ಆಯ್ಕೆ, ಮಾಜಿ ಸಚಿವ ರಾಜೂಗೌಡರ ಮಾರ್ಗದರ್ಶನದಲ್ಲಿ ಮುಂದುವರಿಯುವೆ: ಚಂದ್ರು

ವರದಿ: ಎನ್.ಎನ್.

ಕ್ರಾಂತಿವಾಣಿ ವಾರ್ತೆ ಸುರಪುರ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣ ಸದಸ್ಯರಾಗಿ ಚಂದ್ರಶೇಖರ್ ಗೋಗಿ ಅವರನ್ನು ಆಯ್ಕೆ ಮಾಡಿ ಬಿಜೆಪಿ ಬಿಸಿಎಂ ಮೋರ್ಚಾದ ರಾಜ್ಯಾಧ್ಯಕ್ಷ ಆರ್. ರಘು ಅವರು ಆದೇಶ ಪ್ರತಿಯನ್ನು ಬೆಂಗಳೂರಿನಲ್ಲಿ ವಿತರಿಸಿದ್ದಾರೆ.

ಹೊಣೆಗಾರಿಕೆಯನ್ನುಅತ್ಯಂತ ಜವಾಬ್ದಾರಿಯಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಬೇಕು. ಮುಂಬರುವ ಲೋಕಸಭಾ ಸೇರಿದಂತೆ ಇತರೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ನಿಸ್ವಾರ್ಥ ಮನೋಭಾವದಿಂದ ಶ್ರಮಿಸಬೇಕು ಎಂದು ಆದೇಶ ಪ್ರತಿಯಲ್ಲಿ ಆದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋರ್ಚಾದ ಕಾರ್ಯಕಾರಿಣ ಸದಸ್ಯರಾಗಿ ಚಂದ್ರಶೇಖರ್ ಗೋಗಿ, ಬಿಜೆಪಿಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಹಿಂದುಳಿದ ವರ್ಗಗಳನ್ನು ಸೇರಿದಂತೆ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಶ್ರಮಿಸಲಾಗುತ್ತದೆ. ಪ್ರತಿ ಮನೆಮನೆ, ಗಲ್ಲಿ ಗಲ್ಲಿ, ಪಟ್ಟಣ, ನಗರ ಸೇರಿದಂತೆ ಪ್ರತಿಯೊಬ್ಬರಿಗೂ ಬಿಜೆಪಿ ರಾಜ್ಯ ಮತ್ತು ಕೇಂದ್ರದಲ್ಲಿ ಮಾಡಿರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಮಾಜಿ ಶಾಸಕ ರಾಜೂಗೌಡ ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ ಎಂದು ತಿಳಿಸಿದರು.
ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಹಾಲಪ್ಪ ಆಚಾರ್, ರಾಜ್ಯ ಪ್ರಧಾನ ಸಂಘಟನಕಾರ ರಾಜೇಶ ಜಿ, ಹಿಂದುಳಿದ ವರ್ಗಗಳ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳು ಯಶ್ಪಾಲ್ ಆನಂದ ಸುವರ್ಣ ಸೇರಿದಂತೆ ಇತರರಿದ್ದರು.

 

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ