ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ : ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅಗಲಿಕೆಯಿಂದ ತೆರವಾಗಿರುವ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನವನ್ನು ಶಾಸಕರ ಪುತ್ರ, ಯುವ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ್ ನಾಯಕ್ ಅವರಿಗೆ ನೀಡಬೇಕಿ ಎಂದು ರಾಜ್ಯ ಮತ್ತು ರಾಷ್ಟ್ರ ನಾಯಕರಲ್ಲಿ ಕಾಂಗ್ರೆಸ್ ಯುವ ಮುಖಂಡ ಕುಮಾರ್ ಪಾಟೀಲ್ ಮನವಿ ಮಾಡಿದ್ದಾರೆ..
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ಉಳ್ಳವರಾಗಿದ್ದರು. ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಭದ್ರಪಡಿದಲು 40ವರ್ಷದಿಂದ ಶ್ರಮಿಸಿದಗದಾರೆ. ನಾಲ್ಕನೇ ಬಾರಿ ಶಾಸಕರಾಗಿದ್ದ ಅವರು ಕಳೆದ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಶಾಸಕರಾದ ನಂತರ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷವಾಗಿ ನೀರಾವರಿ ಶಿಕ್ಷಣ ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿಗೊಳ್ಳಬೇಕೆಂದು ಕನಸು ಹೊತ್ತಿದ್ದರು. ಅವರ ಅಕಾಲಿಕ ನಿಧನದಿಂದ ಕಾರ್ಯಕರ್ತರಲ್ಲಿ ಅಪಾರ ನೋವುಂಟು ಮಾಡಿದೆ. ಅವರ ಕಂಡ ಕನಸು ನನಸಾಗಿಸಲು ಹಾಗೂ ಕ್ಷೇತ್ರದ ಪಕ್ಷ ಸಂಘಟನೆ ಅನುಕೂಲವಾಗಲು ಹಾಗೂ ಜನನಾಯಕನನ್ನು ಕಳೆದುಕೊಂಡ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಲು ದಿವಂಗತ ಆರ್ ವಿ ಎನ್ ಅವರ ಪುತ್ರರಾದ ಯುವ ನಾಯಕರಾಗಿರುವ ರಾಜಾ ವೇಣುಗೋಪಾಲ್ ನಾಯಕ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ..