ವರದಿ : ಎಸ್.ಎಂ.ಆರಿ
ಗದಗ : ನರೇಗಾ ಯೋಜನೆಯಡಿಯಲ್ಲಿ ಕೂಲಿಕಾರರಿಗೆ ಇದ್ದೂರಲ್ಲೆ ಕೆಲಸಗಳು ಸಿಗುತ್ತವೆ, ಹೀಗಾಗಿ ಯಾರು ಗುಳೆ ಹೊಗುವ ಅವಶ್ಯಕತೆ ಉದ್ಭವಿಸಲ್ಲಾ, ನರೇಗಾ ಯೋಜನೆಯು ಕಾರ್ಮಿಕ ಸ್ನೇಹಿ ವಾತವರಣ ಹೊಂದಿದೆ ಎಂದು ಅಬ್ಬಿಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ ಅಭಿಪ್ರಾಯಪಟ್ಟರು.
ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಮೇ-1 ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ನರೇಗಾ ಕೂಲಿಕಾರರ ಜೊತೆಗೆ ಕೇಕ್ ಕತ್ತರಿಸಿ ಸಿಹಿ ತಿನ್ನುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಬ್ಬಿಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ ನರೇಗಾ ಯೋಜನೆಯಡಿಯಲ್ಲಿ ಕೂಲಿಕಾರ್ಮಿಕರಿಗೆ ಅಧಿಕ ಸೌಲಭ್ಯಗಳಿವೆ. ಕೂಲಿಕಾರರ ಕೇಂದ್ರಿಕೃತ ಯೋಜನೆಯಾಗಿದ್ದು ದೇಶಾದ್ಯಂತ ಸಾಮಾನ್ಯ ಕೂಲಿಕಾರರ ಆರ್ಥಿಕ ಜೀವನಕ್ಕೆ ನರೇಗಾ ಯೋಜನೆ ಸಹಾಯಕವಾಗಿದೆ. ನರೇಗಾ ಯೋಜನೆಯಡಿ ಕೆಲಸ ಮಾಡುವ ಸಂದರ್ಭದಲ್ಲಿ ಕೂಲಿಕಾರರು ಮೃತರಾದರೆ 2 ಲಕ್ಷವರೆಗೆ ಪರಿಹಾರ ನೀಡುವ ವ್ಯವಸ್ಥೆವಿದೆ. ಕೆಲಸ ಮಾಡುವ ಸಂದರ್ಭದಲ್ಲಿ ಕೂಲಿಕಾರರಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ದಣಿವಾರಿಸಿಕೊಳ್ಳಲು ನೆರಳಿನ ವ್ಯವಸ್ಥೆ ಮಾಡುವುದು ಯೋಜನೆಯಲ್ಲಿದೆ. ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸುವ ದಿನವಾಗಿದ್ದು. ಕಾರ್ಮಿಕಪರ ಹೋರಾಟಗಾರರ ಶ್ರಮದ ಫಲದಿಂದ ಇಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳಲ್ಲಿ ಕಾರ್ಮಿಕರಿಗೆ ಅಧಿಕ ಸೌಲಭ್ಯಗಳು ಸಿಗುವಂತ್ತಾಗಿವೆ. ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಕೂಲಿಕಾರರು ಸಂಭ್ರಮಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನರೇಗಾ ಕೂಲಿಕಾರರು ಕಾರ್ಮಿಕ ದಿನಾಚರಣೆಗೆ ಸಿದ್ಧಪಡಿಸಿದ ವಿಶೇಷ ಕೇಕ್ ನ್ನು ಕಾರ್ಮಿಕರೇ ಕತ್ತರಿಸುವ ಮೂಲಕ ಇನ್ನಿತರ ಕೂಲಿಕಾರರಿಗೆ ಕೇಕ್ ತಿನಿಸಿ ಕಾರ್ಮಿಕ ದಿನಾಚರಣೆ ಯ ಶುಭಾಶಯ ಕೋರಿದರು ಕಾರ್ಯಕ್ರಮದಲ್ಲಿ ಅಬ್ಬಿಗೇರಿ ಗ್ರಾಮ ಪಂಚಾಯತ ಸಿಬ್ಬಂದಿ ವರ್ಗ, ನರೇಗಾ ಸಿಬ್ಬಂದಿ ವರ್ಗ ಮತ್ತು ಕೂಲಿಕಾರರು ಭಾಗವಹಿಸಿದ್ದರು…