ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ:
ಮತಕ್ಷೇತ್ರದ ಜನತೆಯು ಕಾಂಗ್ರೆಸ್ ಪಕ್ಷವನ್ನು ಮೆಚ್ಚಿಕೊಳ್ಳುವಂತ ಕಾರ್ಯಗಳನ್ನು ಮಾಡಬೇಕು. ಪಕ್ಷವನ್ನು ಸದೃಢಗೊಳಿಸುವ ಕೆಲಸವನ್ನು ಮಾಡಬೇಕು ಎಂಬುದಾಗಿ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ಬೆಂಗಳೂರಿನಲ್ಲಿ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ ಬಳಿಕ ಪತ್ರಿಕೆಯೊಂದಿಗೆ ದೂರವಾಣ ಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಕಾರ್ಯ ವೈಖರಿಯೂ ನಮಗೆ ಮಾರ್ಗದರ್ಶನವಾಗಿದೆ. ಇಡೀ ರಾಷ್ಟಾçದ್ಯಂತ ಪಾದಯಾತ್ರೆ ಮಾಡಿ ಪಕ್ಷಕ್ಕೆ ಪುನಶ್ಚೇತನ ನೀಡಿದ್ದಾರೆ. ಅವರ ಸೂಚನೆಯಂತೆ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಯೋಜನೆಗಳ ನಕ್ಷೆಯನ್ನು ರೂಪಿಸಲಾಗುತ್ತದೆ ಎಂದರು.
ಕ್ಷೇತ್ರದ ಜನತೆ ಮರೆಯದಂತ ಕೆಲಸ ಕಾರ್ಯಗಳಿಗೆ ಒತ್ತು ನೀಡಲಾಗುವುದು. ಮೊದಲನೇ ಜಯಕ್ಕೆ ಕಾರಣರಾದ ಮತದಾರರ ಋಣ ತೀರಿಸಲು ಶ್ರಮಿಸುತ್ತೇನೆ. ರಾಷ್ಟç ನಾಯಕ ರಾಹುಲ್ ಗಾಂಧಿಯವರು ಒಳ್ಳೆಯ ಕಾರ್ಯಗಳನ್ನು ಮಾಡಲು ತಿಳಿಸಿದ್ದಾರೆ. ನಮ್ಮ ತಂದೆಯವರಾದ ರಾಜಾ ವೆಂಕಟಪ್ಪ ನಾಯಕ ಅವರ ನಮಗೆ ಅದನ್ನು ಹೇಳಿಕೊಟ್ಟಿದ್ದಾರೆ. ಅದರಂತೆ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ..ಕೆ ಶಿವಕುಮಾರ, ಮುಖಂಡರಾದ ರಾಜಾ ಕುಮಾರ ನಾಯಕ, ವಿಠ್ಠಲ್ ಯಾದವ್, ವೆಂಕೋಬ ಸಾಹುಕಾರ ಸೇರಿದಂತೆ ಇತರರಿದ್ದರು.