ವರದಿ: ಎನ್.ಎನ್.
ಕ್ರಾಂತಿವಾಣಿ ವಾರ್ತೆ ಸುರಪುರ:
ಯಾದಗಿರಿ ಜಿಲ್ಲೆಯಲ್ಲಿ ಅವಿರತವಾಗಿ ಕೆಲಸ ಮಾಡಿ ನಿರಂತರ ಪಕ್ಷವನ್ನು ಗೆಲ್ಲಿಸಿಕೊಂಡು ಬಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ್ ಅವರಿಗೆ ಪ್ರಬಲ ಖಾತೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕದ (ಓಬಿಸಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಭಂಡಾರಪ್ಪ ನಾಟೇಕರ್ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವರು ನೇತೃತ್ವ ವಹಿಸಿಕೊಂಡು ಲೋಕಸಭೆ ಚುನಾವಣೆಯಲ್ಲಿ ಜಿ.ಕುಮಾರ್ ನಾಯಕ್ ಅವರನ್ನು ಸುರಪುರ ವಿಧಾನಸಭೆ ಉಪಚುನಾವಣೆಯಲ್ಲಿ ರಾಜಾ ವೇಣುಗೋಪಾಲ್ ನಾಯಕ್, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಡಾ.ಚಂದ್ರಶೇಖರ್ ಪಾಟೀಲರ ಗೆಲುವಿಗೆ ನಿರಂತರ ಶ್ರಮಿಸಿರುವುದು ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.
ಇನ್ನು ಮುಂದೆಯೂ ಹೆಚ್ಚು ಕಾರ್ಯ ನಿರ್ವಹಿಸುವಂತಾಗಲು ಅವರಿಗೆ ಜನರ ಮಧ್ಯೆ ಇದ್ದು ಕೆಲಸ ಮಾಡಲು ಅವಕಾಶ ಇರುವ ಪ್ರಭಾವಿ ಖಾತೆ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.