ಸ್ವಚ್ಛತೆಯಿದ್ದರೆ ಆರೋಗ್ಯ ಸುರಕ್ಷಿತ: ತಹಸೀಲ್ದಾರ್ ವಿಜಯಕುಮಾರ.. ಡೆಂಘೀ ವಿರೋಧಿ ಮಹಾಸಾಚರಣೆ ಮತ್ತು ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ

ವರದಿ: ಎನ್.ಎನ್.

ಕ್ರಾಂತಿವಾಣಿ ವಾರ್ತೆ
ಸುರಪುರ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಮತ್ತು ತಾಲೂಕು ಆಡಳಿತದಿಂದ ಡೆಂಘೀ ವಿರೋಧಿ ಮಾಸಾಚರಣೆ ಮತ್ತು ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಕೆ. ವಿಜಯ್ ಕುಮಾರ್ ಡೆಂಘೀ ರೋಗವು ಜೀವಕ್ಕೆ ಹಾನಿಕಾರಕವಾಗಿದ್ದು, ಸಾಧ್ಯವಾದಷ್ಟು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.
ಎಲ್ಲಿಯೂ ನೀರು ನಿಲ್ಲದಂತೆ ಸೊಳ್ಳೆಗಳ ಉತ್ಪತ್ತಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ .ರಾತ್ರಿ ಹೊತ್ತಿನಲ್ಲಿ ಸೊಳ್ಳೆ ಪರದೆಗಳನ್ನು ಕಟ್ಟಿಕೊಂಡು ಸೊಳ್ಳೆಯಿಂದ ಮುಕ್ತ ರಾಗಬೇಕು ಎಂದು ಕರೆ ನೀಡಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಮಾತನಾಡಿ, ಕುಷ್ಟರೋಗವನ್ನು ಇಂದಿನ ಕಾಲದಲ್ಲಿ ಸುಲಭವಾಗಿ ಪತ್ತೆ ಹಚ್ಚಬಹುದು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಕಾಣಿಸಿಕೊಳ್ಳುತ್ತದೆ. ತಿಳಿ ಬಿಳಿ ತಾಮ್ರಾ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಇದ್ದಲ್ಲಿ ಅದೊಂದು ಕುಷ್ಠ ರೋಗ ಇರಬಹುದು. ಸರ್ಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಉಚಿತವಾಗಿರುತ್ತದೆ. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಪರೀಕ್ಷಿಸಿಕೊಳ್ಳಬಹುದು ಎಂದರು.
ತಾಲೂಕು ಮಟ್ಟದ ಅಧಿಕಾರಿಗಳಾದ ಅನಿಲ್ ಕಾಂಬ್ಳೆ, ಪಂಡಿತ್ ನಿಂಬೂರೆ, ನಗರಸಭೆ ಇಂಜಿನಿಯರ್ ಮಹೇಶ್ ಚೌಹ್ವಾಣ ಸೇರಿದಂತೆ ಇತರರಿದ್ದರು..

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ