ವರದಿ : ಎನ್.ಎನ್.
ಕ್ರಾಂತಿವಾಣಿ ವಾರ್ತೆ
ಸುರಪುರ: ರಾಜ್ಯದ ಪಿಡಿಒ ಅವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ಅ. ೪ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ರಾಜ್ಯದ ಸುಮಾರು ೪೫೦೦ಕ್ಕೂ ಹೆಚ್ಚಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಹೋರಾಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಪಿಡಿಒ ಎಲ್ಲಾ ಹುದ್ದೆಗಳನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು. ನಮ್ಮ ಸೇವೆಯನ್ನು ಗೌರವಿಸಬೇಕು. ಇದರ ಪರಿಣಾಮ ಸುರಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿನ ಅನೇಕ ಮೂಲಭೂತ ಸೌಕರ್ಯಗಳ ಕೆಲಸಗಳು ಸ್ಥಗಿತಗೊಳ್ಳಲಿವೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದ್ದಾರೆ.
ಚಿತ್ರ: ಬಾಲಕೃಷ್ಣ